“ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು. ಯುಗಾದಿಯನ್ನು ಪಂಚಾಂಗ, ವೇದಗಳ ಪ್ರಕಾರ ಅಥವಾ ಭಾರತೀಯ ಸಮಯದ ಪರಿಕಲ್ಪನೆಯ ಪ್ರಕಾರ ಹೊಸ ಪ್ರಾರಂಭದ ದಿನ ಎಂದು ಪರಿಗಣಿಸಲಾಗುತ್ತದೆ., ಚೈತ್ರ ಶುಕ್ಲ ಪಾಡ್ಯಮಿಯ ದಿನದಂದು ಬ್ರಹ್ಮಾಂಡದ ಸೃಷ್ಟಿಯನ್ನು ಬ್ರಹ್ಮ ಪ್ರಾರಂಭಿಸಿದೆ ಎಂದು ಹೇಳಲಾಗುತ್ತದೆ, ಯುಗಾದಿ ಪದವು ಹೊಸ ಯುಗ ಅಥವಾ ಯುಗವನ್ನು ಪ್ರಾರಂಭಿಸುತ್ತದೆ ಮತ್ತು ಹೊಸ ತಿಂಗಳ ಆರಂಭವನ್ನು ಸೂಚಿಸುತ್ತದೆ.
ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ.
ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್.
ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಯುಗಾದಿ ಆಚರಣೆ ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಯುಗಾದಿ ಆಚರಣೆ ದಿನ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು OR ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ಪ್ರಸಾದವನ್ನು ತೆಗೆದುಕೊಳ್ಳುವ ಮೊದಲು ಪಠಿಸಬೇಕಾದ ಶ್ಲೋಕವಿದೆ ಅದು
ಶತಾಯು ವಜ್ರ ದೇಹಾಯ ಸರ್ವ ಸಂಪತ್ತ ಕರಾಯಚ
ಸರ್ವಾರಿಷ್ಟ ವಿನಾಶಯ ನಿಂಬಕಂ ದಳ ಭಕ್ಷಣಂ ||
ಅದರರ್ಥ ಹೀಗಿದೆ – ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.
- ದ.ರಾ.ಬೇಂದ್ರೆಯವರ ಯುಗಾದಿ ಬಗೆಗಿನ ಈ ಕವಿತೆ
“ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಲಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಿ ಬರುತ್ತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವ ಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ವರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ
ಒಂದೆ ಒಂದು ಜನ್ಮದಲ್ಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೋ
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ”